ಬೆಂಗಳೂರು: ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಮಹಿಳೆಯ ಅಪಹರಣ ಪ್ರಕರಣದಲ್ಲಿ ಸಿಲುಕಿರುವ ಹೆಚ್‌ಡಿ ರೇವಣ್ಣ ಪತ್ನಿ ಭವಾನಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿ ಸಮನ್ಸ್ ಜಾರಿ ಮಾಡಲಾಗಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ನಿಂದ ಸಮನ್ಸ್ ಜಾರಿ ಮಾಡಲಾಗಿದ್ದು, ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.
ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್ ಗೆ ಐಪಿಸಿ ಸೆಕ್ಷನ್ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್‍ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್ ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿ, ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…