ರಾಜ್ಯ

ಕಿಡ್ಯ್ನಾಪ್‌ ಕೇಸ್‌ನಲ್ಲಿ ಹೆಚ್‌.ಡಿ ರೇವಣ್ಣ, ಭವಾನಿ ಸೇರಿ 9 ಆರೋಪಿಗಳಿಗೆ ಸಮನ್ಸ್‌ ಜಾರಿ

ಬೆಂಗಳೂರು: ಮೈಸೂರು ಜಿಲ್ಲೆಯ ಕೆಆರ್‌ ನಗರ ತಾಲೂಕಿನ ಮಹಿಳೆಯ ಅಪಹರಣ ಪ್ರಕರಣದಲ್ಲಿ ಸಿಲುಕಿರುವ ಹೆಚ್‌ಡಿ ರೇವಣ್ಣ ಪತ್ನಿ ಭವಾನಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿ ಸಮನ್ಸ್‌ ಜಾರಿ ಮಾಡಲಾಗಿದೆ.

ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ನಿಂದ ಸಮನ್ಸ್‌ ಜಾರಿ ಮಾಡಲಾಗಿದ್ದು, ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.

ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್‌ ಗೆ ಐಪಿಸಿ ಸೆಕ್ಷನ್ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್‍ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್‌ ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿ, ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

14 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

14 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

16 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

18 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

21 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

21 hours ago