ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆಯಿಂದ ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಪರಿಗಣಿಸಿ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಮಹಿಳೆಯರ ವಿರುದ್ಧ ನೀಡಿದ ಹೇಳಿಯನ್ನು ಗಂಭೀರವಾಗಿ ಪರಿಗಣಿಸದ ಮಹಿಳಾ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಂಡು, ಎಚ್.ಡಿ ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಿದೆ.
ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಕುಮಾರಸ್ವಾಮಿ, ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ. ಗ್ಯಾರಂಟಿ ಯೋಜನೆ ಹೆಸರಲ್ಲಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಏಪ್ರಿಲ್ 13 ರಂದು ತುಮಕೂರಿನಲ್ಲಿ ನಡೆದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿ, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದಿದ್ದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…