ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ್ ನಡುವೆ ಬಣ ಬಡಿದಾಟ ಜೋರಾಗಿ ನಡೆಯುತ್ತಿದೆ. ಈ ನಡುವೆಯೇ ಸುನೀಲ್ ಕುಮಾರ್ ಅವರು ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿರುವುದು ಕೂತುಹಲ ಮೂಡಿಸಿದೆ. ಸುನೀಲ್ ಈ ವಿಚಾರವಾಗಿ ಮೊದಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮೌಖಿಕವಾಗಿ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ ಇದೀಗ ಅಧಿಕೃತವಾಗಿ ತಿಳಿಸಿದ್ದು, ಈ ನಿರ್ಧಾರ ನನ್ನ ವೈಯಕ್ತಿಕ ಕಾರಣವಾಗಿದ್ದು, ಪಕ್ಷದಲ್ಲಾಗುತ್ತಿರುವ ಬಣ ಬಡಿದಾಟವಲ್ಲ ಎಂದು ಹೇಳಿದ್ದಾರೆ.
ಬಿ.ವೈ.ವಿಜಯೇಂದ್ರ ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ. ಆದರೆ ಸುನೀಲ್ ಅವರ ಮನವಿಗೆ ಪಕ್ಷದಿಂದ ಯಾವುದೇ ರೀತಿಯ ತೀರ್ಮಾನವನ್ನು ಕೈಗೊಂಡಿಲ್ಲ. ಇನ್ನೂ ಕಳೆದ ಚುನಾವಣೆಯಲ್ಲಿ ಸುನೀಲ್ ರಾಜ್ಯ ಉಸ್ತುವಾರಿಯಾಗಿ ವಿಜಯೇಂದ್ರ ಅವರೊಂದಿಗೆ ಯಾವುದೇ ವಿವಾದವಿಲ್ಲದೆ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಬಣ ಬಡಿದಾಟದಲ್ಲಿ ಯಾರ ಪರವಹಿಸದೇ ತಟಸ್ಥವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಬಿಜೆಪಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನೀಲ್ ಕುಮಾರ್, ನಂದೀಶ್ ರೆಡ್ಡಿ, ಪ್ರೀತಮದದ ಗೌಡ ಹಾಗೂ ಪಿ.ರಾಜೀವ್ ಅವರನ್ನು ನೇಮಿಸಲಾಗಿತ್ತು.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…