ರಾಜ್ಯ

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್‌ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು.

2025-26ನೇ ಸಾಲಿನ ಹಿಂಗಾರು ಹಂಗಾಮಿಗೆ 18.21 ಲಕ್ಷ ಮೆಟ್ರಿಕ್‌ ಟನ್‌ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ. ಅಕ್ಟೋಬರ್.‌2025ರಿಂದ ಜನವರಿ.2026ರವರೆಗೆ 12.46 ಲಕ್ಷ ಮೆಟ್ರಿಕ್‌ ಟನ್‌ ಬೇಡಿಕೆಯಿದ್ದು, 27ನೇ ಜನವರಿ 2026ರವರೆಗೆ 21.89 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್‌ ಟನ್‌ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್‌ ಟನ್‌ ದಾಸ್ತಾನಿರುತ್ತದೆ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

18 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

46 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

1 hour ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

1 hour ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago