ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು.
2025-26ನೇ ಸಾಲಿನ ಹಿಂಗಾರು ಹಂಗಾಮಿಗೆ 18.21 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ. ಅಕ್ಟೋಬರ್.2025ರಿಂದ ಜನವರಿ.2026ರವರೆಗೆ 12.46 ಲಕ್ಷ ಮೆಟ್ರಿಕ್ ಟನ್ ಬೇಡಿಕೆಯಿದ್ದು, 27ನೇ ಜನವರಿ 2026ರವರೆಗೆ 21.89 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿರುತ್ತದೆ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…