ರಾಜ್ಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ: ಹೆಚ್.ವಿಶ್ವನಾಥ್‌

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ ಸದಸ್ಯನಾಗಿದ್ದೇನೆ ಎಂದು ತಿಳಿಸಿದ್ದಾರೆ.

ನಮ್ಮ ಮನೆ ಕಾಂಗ್ರೆಸ್‌, ಆದರೆ ಸುಮ್ಮನೆ ಬಿಜೆಪಿಯಲ್ಲಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ನೇರವಾಗಿ ಹೆಚ್‌.ವಿಶ್ವನಾಥ್‌ ಹೇಳಿದ್ದಾರೆ.

ನಿನ್ನೆ ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಹೋಗಿದ್ದೂ ನಿಜ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನನ್ನನ್ನು ಔತಣ ಕೂಟಕ್ಕೆ ಕರೆದಿದ್ದರೂ. ಆದರೆ ಸಭೆಗೆ ಅಲ್ಲ. ಔತಣಕೂಟ ನಡೆಯುವ ಸ್ಥಳದ ಬದಲಾಗಿ ತಿಳಿಯದೆ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಹೋದೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್‌ ಬನ್ನಿ ಎಂದು ಕರೆದಿದ್ದ ಕಾರಣ ಸಭೆಯಲ್ಲಿ ಕೂತಿದ್ದೆ. ನಂತರ ನಾನು ಊಟಕ್ಕೆ ತೆರಳಿದೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಹಾಬೇಕು ಎಂದು ಚರ್ಚೆ ನಡೆಸಿದರು ಎಂದು ತಿಳಿಸಿದರು.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

7 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

8 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

8 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

8 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

13 hours ago