ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಯ ಬಹಿರಂಗ ಹೇಳಿಕೆಗಳು ಜೋರಾದ ಮೇಲೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಸಖತ್ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ಬೆಳಗ್ಗೆಯೇ ಡಿ.ಕೆ. ಶಿವಕುಮಾರ್ ಸಿಎಂ ಆದರೆ ಜೆಡಿಎಸ್ನ 19 ಶಾಸಕರೂ ಬೆಂಬಲ ಕೊಡುತ್ತೇವೆ. ಡಿಕೆ ಶಿವಕುಮಾರ್ ಅವರು ಬೇಕಿದ್ರೆ ಸಿಎಂ ಆಗಲಿ. ನಾವೂ ಸಹ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ಘೋಷಣೆ ಮಾಡಿದರು.
ಸುದ್ದಿಗಾರರೊಂದಿಗೆ ವ್ಯಂಗ್ಯವಾಗೇ ಮಾತನಾಡಿರುವ ಎಚ್.ಡಿ ಕುಮಾರಸ್ವಾಮಿ ಅವರು ನಾನ್ಯಾಕೆ ಅವರಿಗೆ ಅಡ್ಡಿಯಾಗಲಿ. ನಮ್ಮ ಎಂಎಲ್‌ಎಗಳಿಗೆ ದಿನ ಬೆಳಗಾದ್ರೆ ಪಕ್ಷಕ್ಕೆ ಬನ್ನಿ ಅಂತ ಅರ್ಜಿ ಹಾಕಿ ಕರೆಯುತ್ತಿದ್ದಾರೆ. ಯಾಕೆ ಸುಮ್ನೆ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಲು ಕರೆಯುತ್ತಿದ್ದಾರೆ. ನನಗೇನೂ ವೈರತ್ವ ಇಲ್ಲ ನಾವೇ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…