ಬೆಂಗಳೂರು: ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರ ವಿಷಯದಲ್ಲಿ ಸುಪ್ರೀಂ ಮಧ್ಯಸ್ಥಿಕೆವಹಿಸಿ ರಾಜ್ಯದ ರೈತರಿಗೆ ನ್ಯಾಯ ದೊರಕಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಘಟಕ ಸ್ವಾಗತಿಸಿದೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಹೇಳಿದ್ದಾರೆ. 2023ರ ಸೆಪ್ಟಂಬರ್ ತಿಂಗಳಿನಲ್ಲಿ ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಬರ ಪರಿಹಾರ ನೀಡದ ಕೇಂದ್ರದ ನಿಲುವಿನ ಬಗ್ಗೆ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಹೋರಾಟಕ್ಕೆ ಯಶಸ್ಸು ಸಿಕ್ಕದೆ ಎಂದು ಪೋಸ್ಟ್ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತು ರಾಮನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಒಕ್ಕೂಟದ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಸದ ಡಿ.ಕೆ ಸುರೇಶ್ ಅವರು ಧ್ವನಿ ಎತ್ತಿದ್ದರು. ನಾವೆಲ್ಲರೂ ಸೇರಿ ನಡೆಸಿದ ಹೋರಾಟದಿಂದಾಗಿ ನಮಗೆ ನ್ಯಾಯ ಸಿಕ್ಕಿದೆ. ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ಘಟಕ ತನ್ನ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿ, ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಒಂದು ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಕೇಂದ್ರ ಸರ್ಕಾರ ಒಪ್ಪಿದೆ, ಇದು ಸ್ವಾಗತರ್ಹ ಎಂದಿದೆ.
ಚುನಾವಣಾ ಭಾಷಣದಲ್ಲಿ ಸುಳ್ಳು ಹೇಳುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಬಾಲ ಮುದುರಿ ಒಪ್ಪಿಕೊಂಡಿದೆ. ಕನ್ನಡಿಗರ ಹಿತ ಕಾಯುವ ದೃಷ್ಟಿಯಿಂದ ಕೋರ್ಟ್ ಮೆಟ್ಟಿಲೇರುವ ಕರ್ನಾಟಕ ಸರ್ಕಾರದ ದಿಟ್ಟ ನಿರ್ಧಾರದಿಂದ ಕನ್ನಡದ ರೈತರಲ್ಲಿ ಆಶಾಭಾವನೆ ಮೂಡುವಂತಾಗಿದೆ. ಈ ಹೋರಾಟದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಿ ಬೆಂಬಲವಾಗಿ ನಿಂತ ರಾಜ್ಯದ ರೈತರು ಹಾಗೂ ಪ್ರಜ್ಞಾವಂತ ಜನತೆಗೆ ಧನ್ಯವಾದಗಳನ್ನು ತಿಳಿಸಿದೆ.
ಇನ್ನೂ ಸಚಿವ ಸಂಪುಟದ ಹಲವಾರು ನಾಯಕರು ಕನ್ನಡದ ರೈತರ ಹಿತ ಕಾಯುವ ನಮ್ಮ ಬದ್ಧತೆಗೆ ಗೆಲುವು ಸಿಕ್ಕಿದೆ ಎಂದಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…