ಬೆಂಗಳೂರು: ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು.
ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ.
ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು.
ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಆದರೇ 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ನ್ಯಾಯಪೀಠವು ಯಾವುದೇ ಆದೇಶ ಮಾಡಿಲ್ಲ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…