ಬಳ್ಳಾರಿ: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಬಳ್ಳಾರಿಗೆ ತೆರಳಲು ಅವರಿಗೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಇದರೊಂದಿಗೆ ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ದಶಕಗಳಿಂದ ಮಾಜಿ ಸಚಿವ ಹಾಗೂ ಶಾಸಕ ಜನಾರ್ಧನ ರೆಡ್ಡಿ ಬಳ್ಳಾರಿಗೆ ಹೋಗಲು ಅವಕಾಶ ಇರಲಿಲ್ಲ.
ಈ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದರು. ಈಗ ಅವರು ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು. ಅಲ್ಲಿರುವ ತಮ್ಮ ಐಷಾರಾಮಿ ನಿವಾಸದಲ್ಲಿ ವಾಸ್ತವ್ಯ ಹೂಡಬಹುದು ಎಂದು ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.