ಹೊಸದಿಲ್ಲಿ: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ನಾಲ್ಕು ತಿಂಗಳುಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚಿಸಿದೆ.
ಇದರ ಜತೆಗೆ ವಿಶೇಷ ನ್ಯಾಯಾಲಯದಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅಲ್ಲದೇ ಈ ನಾಲ್ಕು ತಿಂಗಳುಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಇನ್ನೆರಡು ತಿಂಗಳುಗಳ ಕಾಲ ವಿಸ್ತರಣೆ ಮಾಡಬಹುದಾಗಿದೆ.





