ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಈಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂಕಷ್ಟ ತಂದಿಟ್ಟಿದೆ.
ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಫಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ ಮೂರು ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.





