ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡೋದು ಫಿಕ್ಸ್ ಆಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಎಂಎಲ್‌ಸಿ ವಿಶ್ವನಾಥ್‌ರನ್ನು ತರಾಟೆಗೆ ತೆಗೆದುಕೊಂಡ ಕುರುಬ ಸಮುದಾಯದ ಮುಖಂಡರು
ಇದೇ ಸೆಪ್ಟೆಂಬರ್.22ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಆದ್ದರಿಂದ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿಂದು ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಆದರೀಗ ಸುಪ್ರೀಂಕೋರ್ಟ್‌ನಲ್ಲೂ ಅರ್ಜಿ ವಜಾಗೊಂಡಿದ್ದು, ಬಾನು ಮುಷ್ತಾಕ್ ಅವರೇ ದಸರಾ ಉದ್ಘಾಟನೆ ಮಾಡೋದು ಫಿಕ್ಸ್ ಆಗಿದೆ.





