ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡೋದು ಫಿಕ್ಸ್ ಆಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಎಂಎಲ್‌ಸಿ ವಿಶ್ವನಾಥ್‌ರನ್ನು ತರಾಟೆಗೆ ತೆಗೆದುಕೊಂಡ ಕುರುಬ ಸಮುದಾಯದ ಮುಖಂಡರು
ಇದೇ ಸೆಪ್ಟೆಂಬರ್.22ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಆದ್ದರಿಂದ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿಂದು ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಆದರೀಗ ಸುಪ್ರೀಂಕೋರ್ಟ್‌ನಲ್ಲೂ ಅರ್ಜಿ ವಜಾಗೊಂಡಿದ್ದು, ಬಾನು ಮುಷ್ತಾಕ್ ಅವರೇ ದಸರಾ ಉದ್ಘಾಟನೆ ಮಾಡೋದು ಫಿಕ್ಸ್ ಆಗಿದೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…