ನವದೆಹಲಿ- ಅಕ್ರಮ ಡಿ ನೋಟೀಪೀಕೇಷನ್ ಪ್ರಕರಣದಲ್ಲಿ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಪಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದರಿಂದಾಗಿ ಪ್ರಕರಣದಲ್ಲಿ ಯಡಿಯೂರಪ್ಪನವರು ಮತ್ತೊಮ್ಮೆ ಬಂಧನದ ಭೀತಿಯಿಂದ ಪಾರಾಗಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಆಲಂಪಾಷ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತ್ರತ್ವದ ದ್ವಿಸದಸ್ಯ ಪೀಠ ವಜಾಗೊಳಿಸಿ ಮುಂದಿನ ಅರ್ಜಿವಿಚಾರಣೆಯನ್ನು ಜನವರಿ 30 ರಂದು ನಡೆಸುವುದಾಗಿ ಸೂಚನೆ ನೀಡಿತು.
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿದ ಪ್ರಕರಣ ಇದಾಗಿದೆ. ಈ ಆರೋಪವನ್ನು ಯಡಿಯೂರಪ್ಪ ಮತ್ತು ಮುರುಗೇಶ್ ನಿರಾಣಿ ವಿರುದ್ಧ ಮಾಡಲಾಗಿತ್ತು
ಪ್ರಕರಣ ಸಂಬಂಧ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿತ್ತು.
ಅದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆಲಂಪಾಷ ಅವರು ಮದ್ಯಂತರ ಆದೇಶ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
2010-11ರಲ್ಲಿ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಭೂಮಿ ವಾಪಸ್ ಪಡೆದ ಬಗ್ಗೆ ಉದ್ಯಮಿ ಎ.ಆಲಂ ಪಾಷಾ ಅವರು ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿತ್ತು. ತಮ್ಮ ವಿರುದ್ಧದ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಜ. 5ರಂದು ಹೈಕೋರ್ಟ್ ವಜಾಗೊಳಿಸಿತ್ತು.
ಅರ್ಜಿ ವಜಾ ಜೊತೆಗೆ ವಿಚಾರಣೆಗೆ ಆದೇಶ ನೀಡಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದರು. ವಿಚಾರಣೆ ನಡೆಸಿದ್ದ ಕೋರ್ಟ್, ಬಿಎಸ್ವೈ ಅವರನ್ನು ಬಂಧಿಸದಂತೆ ಮಧ್ಯಂತರ ತಡೆ ನೀಡಿ ಆದೇಶಿತ್ತು.
ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯ ಅರ್ಜಿ ವಿಚಾರಣೆ ಜನವರಿ 30ರಂದು ನಡೆಯಲಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಸಮಯಕ್ಕೂ ‘ನಾರಿಶಕ್ತಿ’ ಸವಾಲು 7 ದಿನದಲ್ಲೇ ಸ್ತಬ್ಧಚಿತ್ರ ಸಿದ್ದ