ರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸೂರಜ್ ಹೆಗ್ಡೆ ಅಂತ್ಯಕ್ರಿಯೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಮಂಗಳವಾರ ಹೆಬ್ಬಾಳದ ಶಾಂತಿಧಾಮ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಲೋಕಸಭಾ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದರು.

ಡಾಲರ್ಸ್‌ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ನಿವಾಸಕ್ಕೆ ಆಗಮಿಸಿದ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಹೆಗ್ಡೆ ಅವರ ಪತ್ನಿ ಶಿಲ್ಪ, ಪುತ್ರರಾದ ಸಮೃದ್ಧ್, ವಿಶೃತ್ ಸೇರಿದಂತೆ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಅಲ್ಲದೆ ಸಚಿವರಾದ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಭೈರತಿ ಸುರೇಶ್‍ರವರು ಹೆಗ್ಡೆಯವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.‌

ಹೆಬ್ಬಾಳದ ಶಾಂತಿಧಾಮ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago