ಬೆಂಗಳೂರು: ಜೆಡಿಎಸ್ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಎಂಎಲ್‌ಸಿ ಡಾ.ಸೂರಜ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ನಾಳೆ ಸಿಐಡಿ ಅಧಿಕಾರಿಗಳು ಅರ್ಜಿ ಹಾಕುತ್ತಾರೆ ಎಂದು ಸೂರಜ್ ಪರ ವಕೀಲ ನಿಖಿಲ್ ಕಾಮತ್ ಹೇಳಿದ್ದಾರೆ.
ಇಂದು ಹಾಸನದ ಹಿಮ್ಸ್‌ನಲ್ಲಿ ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಿದ ನಂತರ ಸೂರಜ್ ರೇವಣ್ಣನನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಕಾಮತ್ ಅವರು ಸೂರಜ್ ರೇವಣ್ಣರನ್ನು ಜಡ್ಜ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಕೇಸ್ ಫೈಲ್ ಇನ್ನೂ ಕೈ ಸೇರಿಲ್ಲ. ನಾಳೆ ಸಿಐಡಿ ಅಧಿಕಾರಿಗಳು ಸೂರಜ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಓಪನ್ ಕೋರ್ಟ್‌ಗೆ ಅರ್ಜಿ ಹಾಕುತ್ತಾರೆ ಎಂದು ಪ್ರಕರಣದ ಮಾಹಿತಿ ನೀಡಿದರು.
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…