ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಇದೆ ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುವುದು ನನಗೆ ಗೊತ್ತಿದೆ. ಈ ರೀತಿಯ ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ. ಷಡ್ಯಂತ್ರ ಮಾಡುತ್ತಿರುವವರು ಯಾರು ಎನ್ನುವುದನ್ನು ಈಗ ಹೇಳುವುದಿಲ್ಲ. ಎಲ್ಲವನ್ನೂ ನಾವು ಎದುರಿಸುತ್ತೇವೆ. ಈ ಪ್ರಕರಣದಲ್ಲಿ ಏನೇನು ನಡೆದಿದೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕಾಲ ಬಂದಾಗ ಎಲ್ಲದರ ಬಗ್ಗೆ ಹೇಳುತ್ತೇನೆ, ಆ ಸಮಯ ಬರಲಿ. ನಮ್ಮ ಕಡೆಯವರು ದೂರು ಕೊಡಲು ಹೋಗಿದ್ದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.





