ರಾಜ್ಯ

ಸೂರಜ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ ಎಂದ ಹೆಚ್‌.ಡಿ. ರೇವಣ್ಣ

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಇದೆ ಎಂದು ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುವುದು ನನಗೆ ಗೊತ್ತಿದೆ. ಈ ರೀತಿಯ ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ. ಷಡ್ಯಂತ್ರ ಮಾಡುತ್ತಿರುವವರು ಯಾರು ಎನ್ನುವುದನ್ನು ಈಗ ಹೇಳುವುದಿಲ್ಲ. ಎಲ್ಲವನ್ನೂ ನಾವು ಎದುರಿಸುತ್ತೇವೆ. ಈ ಪ್ರಕರಣದಲ್ಲಿ ಏನೇನು ನಡೆದಿದೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕಾಲ ಬಂದಾಗ ಎಲ್ಲದರ ಬಗ್ಗೆ ಹೇಳುತ್ತೇನೆ, ಆ ಸಮಯ ಬರಲಿ. ನಮ್ಮ ಕಡೆಯವರು ದೂರು ಕೊಡಲು ಹೋಗಿದ್ದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago