ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಆರೋಪಿ ಸೂರಜ್ ರೇವಣ್ಣ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಮಧ್ಯಾಹ್ನ ಕೋರ್ಟ್ ಗೆ ಸೂರಜ್ ನನ್ನ ಹಾಜರು ಪಡಿಸಲಿರೋ ಸಿಐಡಿ, ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಹೊಳೆನರಸೀಪುರ ಠಾಣೆಯ ಪೊಲೀಸರು ಜೂನ್ ೨೨ ರಂದು ಸೂರಜ್ ನನ್ನ ಬಂಧಿಸಿದ್ದರು.ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ತಂಡಕ್ಕೆ ವಹಿಸಿತ್ತು. ಜೂನ್ ೨೩ ರಂದು ಸೂರಜ್ ನನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿ ೭ ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಇಂದಿಗೆ ಕಸ್ಟಡಿ ಅಂತ್ಯವಾಗಿದ್ದು, ಮಧ್ಯಾಹ್ನದ ವೇಳೆಗೆ ಸೂರಜ್ ರೇವಣ್ಣನನ್ನ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಈಗಾಗಲೇ ಸಂತ್ರಸ್ತ ಯುವಕನ ಹೇಳಿಕೆ ದಾಖಲು ಮಾಡಲಾಗಿದ್ದು, ಸೂರಜ್ ರೇವಣ್ಣಗೂ ವೈದ್ಯಕೀಯ ಪರೀಕ್ಷೆ ಕೂಡ ನಡೆಸಲಾಗಿದೆ. ಆದರೆ ಸೂರಜ್ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಸಿಐಡಿ ತಂಡ ಆರೋಪಿಸಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…