ಹಾಸನ : ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸೂರಜ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಇಂದು ಮುಂಜಾನೆಯವರೆಗೂ ಪೊಲೀಸರು ಸೂರಜ್ ರೇವಣ್ಣರನ್ನ ವಿಚಾರಣೆಗೆ ಒಳಪಡಿಸಿದ್ದರು.
ಬಳಿಕ ವಿಚಾರಣೆ ವೇಳೆ ಠಾಣೆಗೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದರು. ಪ್ರಕರಣದ ತನಿಖಾಧಿಕಾರಿ ಸಕಲೇಶಪುರದ ಡಿವೈಎಸ್‌ಪಿ ಪ್ರಮೋದ್ ಕುಮಾರ್ ಅವರು ಸೂರಜ್ ರೇವಣ್ಣರನ್ನು ಬಂಧಿಸಿದ್ದರು. ಇನ್ನು ಇಂದು ಮಧ್ಯಾಹ್ನ ನ್ಯಾಯಾಧೀಶರ ಮುಂದೆ ಆರೋಪಿ ಸೂರಜ್ ರೇವಣ್ಣರನ್ನ ಹಾಜರುಪಡಿಸುವ ಸಾಧ್ಯತೆ ಇದೆ.





