ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಜೆಡಿಎಸ್ MLC ಸೂರಜ್ ರೇವಣ್ಣಗೆ 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಕೇಸ್ ಅನ್ನು ಸಿಐಡಿಗೆ ವಹಿಸಿ ಆದೇಶ ಮಾಡಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಸೂರಜ್ ರೇವಣ್ಣರನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿ 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರಾದ ಶಿವಕುಮಾರ್ ಅವರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಅಲ್ಲದೆ ಜುಲೈ 1 ಸಂಜೆ 4 ಗಂಟೆಗೆ ಸೂರಜ್ ರೇವಣ್ಣರನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.
ಇನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್, ಇನ್ಸ್ಪೆಕ್ಟರ್ ನರೇಂದ್ರ ಬಾಬು ನೇಮಕಗೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…