ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.
ಈ ಕುರಿತು ಇಂದು(ಡಿ.5) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ತೆರಿಗೆಯನ್ನು ಶೇ.33 ರಿಂದ ಶೇ.22ಕ್ಕೆ ಇಳಿಕೆ ಮಾಡುವ ಮೂಲಕ ಕೋಟ್ಯಂತರ ರೂಪಾಯಿಯನ್ನು ನೀಡುತ್ತಿದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ 58 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ಬಡವರ ಖಾತೆಗೆ ಜಮೆ ಮಾಡುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ದಾಳಿ ಮಾಡುವ ಮುಖಾಂತರ ಬಡವರ, ದುರ್ಬಲ ವರ್ಗದವರ ಶಕ್ತಿಯನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನದ ಆಶಯಗಳಂತೆ ನಮ್ಮ ಕಾಂಗ್ರೆಸ್ ಸರ್ಕಾರ ದಲಿತ, ಬಡವರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಸೇರಿದಂತೆ ಸರ್ವರ ಪರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಆದರೆ ಕೇಂದ್ರ ಸರ್ಕಾರ, ಉದ್ಯಮಿಗಳ 78 ಸಾವಿರ ಕೋಟಿ ರೂಪಾಯಿಗಳಷ್ಟು ಸಾಲವನ್ನು ಮನ್ನಾ ಮಾಡುತ್ತಿದ್ದು, ಕರ್ನಾಟಕ ರಾಜ್ಯದ ಪಂಚ ಗ್ಯಾರಂಟಿಗಳ ಮೊತ್ತವನ್ನು ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ, ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ವಿರೋಧ ಪಕ್ಷಗಳಾಗಲಿ ಪಂಚ ಗ್ಯಾರಂಟಿಗಳನ್ನು ತಡೆಯಲು ಸಾಧ್ಯವಿಲ್ಲ. ಗ್ಯಾರಂಟಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತೇವೆ. ಯಾರೇ ಏನೇ ಮಾಡಿದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಇರುವವರೆಗೂ ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…