ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಹಾಗೂ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರಕ್ಕಿಂತ ಪಕ್ಷ ದೊಡ್ಡದಾಗಿದೆ ಎಂದರು.
ಪಕ್ಷ ಒಗ್ಗಟ್ಟಾಗಿದ್ದಾಗ ಮಾತ್ರ ಯಾವ ರಾಜ್ಯದಲ್ಲಾದರೂ ಸರ್ಕಾರವನ್ನು ರಚಿಸಲು ಸಾಧ್ಯ. ಹೀಗಾಗಿ ಯಾವುದೇ ಕಾರಣಕ್ಕೂ ಸಚಿವರಾಗಲಿ ಅಥವಾ ಶಾಸಕರಾಗಲಿ ಪಕ್ಷಕ್ಕೆ ಹಾನಿಯಾಗುವಂತಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿದರು.
ಇನ್ನೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ನಾಯಕತ್ವದ ಸಂಘರ್ಷ ಇದೆ. ಆದರೆ ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆಗಳಿಲ್ಲ. ಮುಂದಿನ ದಿನಗಳಲ್ಲಿಯೂ ಗುಂಪುಗಾರಿಕೆ ಆಗುವುದು ಬೇಡ. ಸಚಿವರು ಹಾಗೂ ಶಾಸಕರು ರಾಜ್ಯದಲ್ಲಿ ನ್ಯಾಯಯುತವಾಗಿ ಆಡಳಿತ ನಡೆಸಿ ಎಂದು ಹೇಳಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…