ಬೆಂಗಳೂರು: ಕರ್ನಾಟಕಕ್ಕೆ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಡಿನ್ನರ್ ಪಾರ್ಟಿ ಹಾಗೂ ಆಪರೇಷನ್ ಹಸ್ತ ಸೇರಿದಂತೆ ಇನ್ನಿತರ ವಿಚಾರಗಳು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ಈ ಬೆನ್ನಲ್ಲೇ ಇಂದು(ಜನವರಿ.13) ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಮೂರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ ಸುರ್ಜೇವಾಲ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ಜೈ ಬಾಪು, ಜೈ ಸಂವಿಧಾನ ಅಧಿವೇಶನಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದಾರೆ. ಅಲ್ಲದೇ ಈ ವೇಳೆಯೇ ಕಾಂಗ್ರೆಸ್ ಆಂತರಿಕ ಕಲಹ ಸರಿಪಡಿಸುವ ಪ್ರಯತ್ನಗಳನ್ನು ಮಾಡುವ ನಿರೀಕ್ಷೆಯಿದೆ.
ಇನ್ನೂ ಇಂದು ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು, ಬಳಿಕ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…