Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಸಿಎಂ ಕಾವೇರಿ ನಿವಾಸದಲ್ಲಿ ಸಮೀಕ್ಷೆ : ವಿವರ ನೀಡಿದ ಸಿಎಂ

ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.

ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

ಇದನ್ನೂ ಓದಿ:-ಅರಣ್ಯದಂಚಿನ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಶಾಸಕ ಚಿಕ್ಕಮಾದು ಸೂಚನೆ

ಸುಮಾರು 45 ನಿಮಿಷಗಳ ಕಾಲ ಗಣತಿದಾರರಿಗೆ ಸಿಎಂ ಮಾಹಿತಿ ನೀಡಿದ್ದು, ಸಿಬ್ಬಂದಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ಒಟ್ಟು 5 ಜನರನ್ನು ಒಳಗೊಂಡಿದ್ದ ಸಮೀಕ್ಷಾ ತಂಡ ಸಿಎಂ ಮನೆಯಲ್ಲಿ ಗಣತಿ ಕಾರ್ಯ ನಡೆಸಿದೆ.

ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗೆ ಮಾಹಿತಿ ನೀಡಿ ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದೇನೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

Tags:
error: Content is protected !!