ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.
ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
ಇದನ್ನೂ ಓದಿ:-ಅರಣ್ಯದಂಚಿನ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಶಾಸಕ ಚಿಕ್ಕಮಾದು ಸೂಚನೆ
ಸುಮಾರು 45 ನಿಮಿಷಗಳ ಕಾಲ ಗಣತಿದಾರರಿಗೆ ಸಿಎಂ ಮಾಹಿತಿ ನೀಡಿದ್ದು, ಸಿಬ್ಬಂದಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ಒಟ್ಟು 5 ಜನರನ್ನು ಒಳಗೊಂಡಿದ್ದ ಸಮೀಕ್ಷಾ ತಂಡ ಸಿಎಂ ಮನೆಯಲ್ಲಿ ಗಣತಿ ಕಾರ್ಯ ನಡೆಸಿದೆ.
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗೆ ಮಾಹಿತಿ ನೀಡಿ ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದೇನೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು ಎಂದು ಸಿಎಂ ಕರೆ ನೀಡಿದ್ದಾರೆ.
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…