ಬೆಂಗಳೂರು: ರಾಜ್ಯದಲ್ಲಿ ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ. ರಾಜ್ಯದ ಪ್ರತಿ ಕುಟುಂಬಕ್ಕೂ ಸೂರು ಕಲ್ಪಿಸುವುದು ನಮ್ಮ ಸರ್ಕಾರದ ಸಂಕಲ್ಪ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಬೆಂಗಳೂರು ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಈಗಾಗಲೇ 2.32 ಲಕ್ಷ ಬಡವರಿಗೆ ಮನೆ ಕಟ್ಟಿಕೊಡುವ ಕ್ರಾಂತಿ ಕಾರಕ ನಿರ್ಧಾರ ಮಾಡಲಾಗಿದೆ. ರಾಜ್ಯದ ಪ್ರತಿ ಕುಟುಂಬಕ್ಕೂ ಸೂರು ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ ಎಂದು ಅವರು ಹೇಳಿದರು.