ರಾಜ್ಯ

ಸಮೀಕ್ಷೆ | PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ : ಸಿಎಂ

ಬೆಂಗಳೂರು : ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ, ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ ಎಂದರು.

ಇದನ್ನು ಓದಿ :  ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೆ ಸಮೀಕ್ಷೆ ಅವಧಿ ವಿಸ್ತರಣೆ

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ. ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು‌.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

15 mins ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

34 mins ago

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

44 mins ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

47 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

4 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

4 hours ago