ರಾಜ್ಯ

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ಸಭಾಂಗಣದಲ್ಲಿ ಬುಧವಾರ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಅಂಕಿ ಅಂಶಗಳ ಕ್ರೋಢೀಕರಣ ನಡೆಯುತ್ತಿದ್ದು, ವರದಿ ಶೀಘ್ರ ಸಲ್ಲಿಸಲಿದ್ದಾರೆ‌‌. ಈ ವರದಿಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಸರ್ಕಾರದ ಯೋಜನೆ ತಲುಪಿಸಲು ಸಾಧ್ಯವಾಗಲಿದೆ ಎಂದರು.

ಅಲ್ಲದೆ, ಕೆಲವರು ಯಾವುದೇ ಮಾಹಿತಿ ಕೇಳಿದರೂ ನಮ್ಮ ಸಮುದಾಯವರು ಅಷ್ಟಿದ್ದಾರೆ. ಇಷ್ಟಿದ್ದಾರೆ ಅನ್ನುತ್ತಾರೆ. ವರದಿಯಿಂದ ವಾಸ್ತವ ಅಂಶ ಗೊತ್ತಾಗಲಿದೆ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಬಗ್ಗೆ ಮುಖ್ಯಮಂತ್ರಿಗಳು ವಿಶೇಷ ಕಾಳಜಿ ಹೊಂದಿದ್ದಾರೆ. ಈ‌ ಹಿಂದಿನ ಸರ್ಕಾರಗಳು ನಿಗಮಕ್ಕೆ ಮೊದಲು ಐದು ಕೋಟಿಯಷ್ಟೇ ಅನುದಾನ ನೀಡುತ್ತಿದ್ದರು. ಕಳೆದ ವರ್ಷ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಟ್ಟಾಗ, ಅದಕ್ಕೆ ಸ್ಪಂದಿಸಿ ಇಲಾಖೆಯ ಎಲ್ಲಾ ನಿಗಮಗಳಿಗೆ ರೂ.1600 ಕೋಟಿ ಅನುದಾನ ಒದಗಿಸಿದ್ದರು. ಈ ಪೈಕಿ ರೂ. 23.24 ಕೋಟಿ ಅನುದಾನವನ್ನು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದೆ. ಅಲ್ಲದೆ, ಗಂಗಾ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಘಟಕದ ವೆಚ್ಚವನ್ನು ರೂ. 2.50 ಲಕ್ಷದಿಂದ ರೂ. 3.75ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಹಿಂದಿನ ಸರ್ಕಾರ ಮೂರುವರೆ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಒಂದೇ ಒಂದು ಕೊಳವೆ ಬಾವಿ ಕೊರೆದಿಲ್ಲ. ನಾನು ಇಲಾಖೆ ಸಚಿವನಾದ ಬಳಿಕ 18 ಸಾವಿರ ಕೊಳವೆ ಬಾವಿ ಕೊರೆಸಲಾಗಿದೆ. ಇನ್ನು ಹಿಂದುಳಿದ ವರ್ಗಗಳ ಮಕ್ಕಳ ವಿದೇಶ ವ್ಯಾಸಂಗಕ್ಕೆ ರೂ. 20 ಲಕ್ಷ ಸಾಲ ನೀಡಲಾಗುತ್ತಿತ್ತು. ನಾವು ಆ ಮೊತ್ತವನ್ನು ಶೂನ್ಯ ಬಡ್ಡಿದರಲ್ಲಿ ರೂ.50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕೂಲಿ ಸಮಾಜ, ಗಂಗಾಮತಸ್ಥ ಸಮಾಜದ ಪ್ರತಿಯೊಬ್ಬರು ಎಚ್ಚೆತ್ತುಕೊಳ್ಳುವ ಕೆಲಸ ಆಗಬೇಕು. ಯಾವ ಜಿಲ್ಲೆಯಲ್ಲಿ ಜಯಂತಿ ಆಚರಣೆ ಮಾಡುತ್ತಿಲ್ಲ ಎಂದು ಹೇಳಿದರೆ ಅವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ವೇದಿಕೆಯಲ್ಲಿದ್ದ ಸಮಾಜದ ಮುಖಂಡರಿಗೆ ಸಚಿವರು ಭರವಸೆ ನೀಡಿದರು.

ಮಹಾನ್ ನಿಷ್ಠುರ ಮಾನವತಾವಾದಿ ಚೌಡಯ್ಯ:
ಹನ್ನೆರಡನೆಯ ಶತಮಾನದ ಬಸವಣ್ಣನವರ ವಚನ ಚಳುವಳಿ ಹುಟ್ಟುಹಾಕಿದ ಹಲವಾರು ಪ್ರತಿಭೆಗಳಲ್ಲಿ ಅಂಬಿಗರ ಚೌಡಯ್ಯನವರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ತಮ್ಮ ವಚನಗಳಲ್ಲಿ ವೈಚಾರಿಕ ನಿರೂಪಣೆಯ ಧಾರೆಯನ್ನು ಹರಿಸುವ ಮೂಲಕ ನಿಷ್ಠುರ ಮಾನವತಾವಾದಿ ಎಂದೇ ಹೆಸರಾಗಿದ್ದವರು ಎಂದರು.

ಶೋಷಣೆಗೆ ಒಳಗಾಗಿದ್ದ ಪರಿಸರದಲ್ಲಿ ಹುಟ್ಟಿ ಬೆಳೆದ ಚೌಡಯ್ಯನವರು ತಮ್ಮ ಸಮುದಾಯದ ಬದಲಾವಣೆಯತ್ತ ಗಮನ ಹರಿಸಿದ್ದರು. ಶರಣರು ತಮ್ಮ ದಿಟ್ಟತನದಿಂದ ಗುರುತಿಸಿಕೊಂಡವರು. ಸಮಾಜದಲ್ಲಿನ ದುರ್ಗಣಗಳ ಕುರಿತು ನಿರ್ದಾಕ್ಷಿಣ್ಯವಾಗಿ ಹಲವು ಅಂಶಗಳನ್ನು ಅವರು ಖಂಡಿಸಿದ್ದಾರೆ. ಧಾರ್ಮಿಕ ಹೆಸರಿನಲ್ಲಿ ನಡೆಯುವ ಮಳಸ, ವಂಚನೆ, ಲಿಂಗಬೇಧ, ತಾರತಮ್ಯಗಳನ್ನು ಅವರು ಖಂಡಿಸಿದ್ದರು ಎಂದು ನೆನೆದರು.

ಬೆಂಗಳೂರಿನಲ್ಲೇ ಪ್ರತಿಮೆ‌ ನಿರ್ಮಾಣ
ಬೆಂಗಳೂರಿನಲ್ಲಿ‌‌ ಅಂಬಿಗರ ಚೌಡಯ್ಯ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು. ಪ್ರತಿಮೆ ನಿರ್ಮಾಣಕ್ಕಾಗಿ ಈಗಾಗಲೇ ಸ್ಥಳ ಹುಡುಕಾಟ ನಡೆಸಿದ್ದೇವೆ. ಸ್ಥಳ ಗುರುತಿಸಿದ ಬಳಿಕ ಇಲಾಖೆ ವತಿಯಿಂದ ಪ್ರತಿಮೆ ನಿರ್ಮಾಣವನ್ನು ಬೆಂಗಳೂರಿನಲ್ಲಿ ಮಾಡಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರೂ ಆದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ರೇಷ್ಮೆ ಮಾರುಕಟ್ಟೆ ಮಂಡಳಿ ಅಧ್ಯಕ್ಷ ಗಂಗಾಧರ್, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮಾನಸ, ಇಲಾಖೆ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕಿ ಕೆ.ಎಂ.ಗಾಯಿತ್ರಿ, , ಪ್ರಾಧ್ಯಾಪಕ ಡಾ.ಸ್ವಾಮಿ‌ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago