ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.
ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ.
ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂಕ್ರಾಂತಿಯ ದಿನದಂದು ಸಂಜೆ ಸೂರ್ಯದೇವ ದೇವಾಲಯದ ಗರ್ಭಗುಡಿಯ ಮೂಲಕ ತನ್ನ ರಶ್ಮಿಯನ್ನು ಗಂಗಾಧರನಿಗೆ ಸ್ಪರ್ಶಿಸುವ ಮೂಲಕ ಸೂರ್ಯರಶ್ಮಿಯ ಅಭಿಷೇಕ ಮಾಡಿದ್ದಾನೆ.
ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 18 ನಿಮಿಷಕ್ಕೆ ಸ್ಪರ್ಶಿಸಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ನಂದಿಯ ವಿಗ್ರಹದ ಎರಡು ಕೊಂಬುಗಳ ಮೂಲಕವಾಗಿ ಸೂರ್ಯನ ಕಿರಣಗಳು ಮುಖ್ಯದ್ವಾರವನ್ನು ದಾಟಿ ಶಿವಲಿಂಗವನ್ನು ಸ್ಪರ್ಶಿಸಿವೆ.
ಈ ಮೂಲಕ ಸೂರ್ಯದೇವರು ಶಿವ ದೇವರಿಗೆ ನಮಸ್ಕರಿಸಿ ಅಭಿಷೇಕ ಮಾಡಿ ಮುಂದೆ ಚಲಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಸ್ಮಯಕಾರಿ ಬೆಳಕಿನ ಕೌತುಕವನ್ನು ನೂರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್ ಮುಖಂಡ…
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ…
ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…
ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಸೆನ್ಸಾರ್…
ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…