Mysore
32
scattered clouds

Social Media

ಬುಧವಾರ, 27 ಮೇ 2026
Light
Dark

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

dinesh gundurao

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ ನೀಡಿದ್ದಾರೆ.

ಉಗಾಂಡದಿಂದ ಬೆಂಗಳೂರಿಗೆ ಬಂದಿದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್‌ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು.

ಇದೀಗ ಲ್ಯಾಬ್‌ ರಿಪೋರ್ಟ್‌ ನೆಗೆಟಿವ್‌ ಬಂದಿದ್ದು, ಅವರಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

 

 

Tags:
error: Content is protected !!