ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾವು ಕೂಡ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. ನಮ್ಮ ಐಎಸ್‌ಡಿ ವಿಭಾಗಕ್ಕೆ ಅಲರ್ಟ್ ಮಾಡಿದ್ದೇವೆ. ಅಲ್ಲಿ ಬಂಧಿತ ಶಂಕಿತರಲ್ಲಿ ಬಾಂಗ್ಲಾದವರೂ ಇದ್ದಾರೆ. ನಮ್ಮಲ್ಲೂ ಬಾಂಗ್ಲಾವಾಸಿಗಳ ಪತ್ತೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಕಳೆದ ಒಂದು ತಿಂಗಳಿಂದ ಈ ಅಭಿಯಾನ ನಡೆಯುತ್ತಿದೆ. ಎಂದು ಹೇಳಿದರು.
ಇನ್ನು ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಅವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…