ರಾಜ್ಯ

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ ಎಂಬ ಅನುಮಾನಗಳು ಕಂಡು ಬಂದಿವೆ.

ಇತ್ತೀಚೆಗೆ ದಾವಣಗೆರೆ ಹಾಗೂ ತುಮಕೂರಿನಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಅವರು ನೀಡಿದ ಸುಳಿವಿನ ಮೇರೆಗೆ ಹರಿಹರದ ಕಾರ್ಖಾನೆಯೊಂದರಲ್ಲಿ ಪೈಂಟರ್ ಕೆಲಸ ಮಾಡಿಕೊಂಡು ತಲೆ ಮರೆಸಿಕೊಂಡಿದ್ದ, ಉತ್ತರಪ್ರದೇಶ ಮೂಲದ ಸುಹೈಲ್‍ನನ್ನು ಬಂಧಿಸಲಾಗಿದೆ.

ಕೇಂದ್ರ ಗುಪ್ತದಳದ ಅಧಿಕಾರಿಗಳು, ದಾವಣಗೆರೆ ಪೊಲೀಸರು ಮತ್ತು ಕ್ರೈಂ ಬ್ರ್ಯಾಂಚ್‍ನ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಶಂಕಿತನನ್ನು ಬಂಧಿಸಿದ್ದಾರೆ. ಬಿಗಿ ಭದ್ರತೆಯೊಂದಿಗೆ ಆರೋಪಿಯನ್ನು ದಾವಣಗೆರೆ ಮತ್ತು ತುಮಕೂರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗಿದೆ.

ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಮಹತ್ವದ ಮಾಹಿತಿಗಳು ಪತ್ತೆಯಾಗಿವೆ. ಪಾಕಿಸ್ತಾನದ ಕಂಟ್ರಿಕೋಡ್‍ನಲ್ಲಿ ಇರುವ ಮೊಬೈಲ್ ಸಂಖ್ಯೆಯೊಂದು ರಾಣಾಬಾಯ್ ಹೆಸರಿನಲ್ಲಿ ಸೇವ್ ಆಗಿದೆ. ಜೊತೆಗೆ ದೇಶವಿರೋಧಿ ಚಟುವಟಿಕೆಗಳಿಗೆ ಕುಮಕ್ಕು ನೀಡುವ ಮೀಮೋನ್ ಮೈಂಡ್ ಜುಟ್ಟು-333, ರಾಣಾಬಾಯ್-333 ಎಂಬ ಕೆಲ ಸಾಮಾಜಿಕ ಜಾಲತಾಣದ ಗುಂಪುಗಳಲ್ಲಿಯೂ ಸುಹೈಲ್ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯ ಮೊಬೈಲ್ ಗ್ಯಾಲರಿ ಪರಿಶೀಲನೆ ವೇಳೆ ಶಸ್ತ್ರಾಸ್ತ್ರ ತರಬೇತಿ ಪಡೆದ ವ್ಯಕ್ತಿಯ ಶೈಲಿಯಲ್ಲೇ ಆಯುಧಗಳನ್ನು ಹಿಡಿದು ಫೋಟೋ ತೆಗೆಸಿಕೊಂಡಿರುವುದು ಕಂಡು ಬಂದಿದೆ. ಅಯೋಧ್ಯೆ ರಾಮಮಂದಿರ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಆರೋಪಿಯು ಸಂಚು ನಡೆಸಿರುವುದು ವಿಚಾರಣೆಯ ವೇಳೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

 

ಆಂದೋಲನ ಡೆಸ್ಕ್

Recent Posts

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

35 mins ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

5 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

5 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

5 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

5 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

5 hours ago