ತುಮಕೂರು: ಬಳ್ಳಾರಿಯಲ್ಲಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಎಸ್‌ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಒಂದೇ ದಿನದಲ್ಲಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಈ ಘಟನೆ ಬೆನ್ನಲ್ಲೇ ಒಂದೇ ದಿನದಲ್ಲಿ ಎಸ್‌ಪಿ ಪವನ್ ನಜ್ಜೂರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.
ಅಮಾನತು ಬೆನ್ನಲ್ಲೇ ತೀವ್ರವಾಗಿ ಮನನೊಂದಿದ್ದ ಪವನ್ ನಜ್ಜೂರ್ ಅವರು ತುಮಕೂರಿಗೆ ಹೋಗಿದ್ದರು. ಅಲ್ಲಿ ತನ್ನ ಸ್ನೇಹಿತನ ಫಾರ್ಮ್ ಹೌಸ್‌ಗೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಅಸ್ವಸ್ಥರಾಗಿದ್ದ ಪವನ್ ನಜ್ಜೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





