ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಾಪಾಸ್ ಪಡೆಯಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಕಾನೂನು ಬಾಹಿರವಾಗಿದೆ. ಯಾವ ಕಾರಣಕ್ಕಾಗ ಸ್ಪೀಕರ್ ಅವರು ಅಮಾನತು ಮಾಡುವ ತೀರ್ಮಾನ ತೆಗೆದುಕೊಂಡರು? ಅವರ ಈ ನಿರ್ಧಾರ ಅಸಂವಿಧಾನತ್ಮಕ, ಏಕಪಕ್ಷೀಯ ಮತ್ತು ಮನಸೋ ಇಚ್ಛೆಯಿಂದ ತೆಗೆದುಕೊಂಡ ತೀರ್ಮಾನದಂತಿದೆ ಎಂದು ಕಿಡಿಕಾರಿದರು.
ಅಮಾನತುಗೊಂಡಿರುವ ಶಾಸಕರೇನು ಭಯೋತ್ಪಾದಕರಾ ಅಥವಾ ನಕ್ಸಲರಾ? ಇತಿಹಾಸದಲ್ಲಿ ಇಷ್ಟು ಸುದೀರ್ಘವಾಗಿ ಅಮಾನತು ಮಾಡಿರುವ ಉದಾಹರಣೆಗಳು ಇಲ್ಲ. ಆದರೆ ಸ್ಪೀಕರ್ ಆರು ತಿಂಗಳ ಕಾಲ ನಮ್ಮ 18 ಶಾಸಕರನ್ನು ಅಮಾನತು ಮಾಡಿದ್ದಾರೆ. ನಾವು ವಿರೋಧ ಪಕ್ಷದವರಾಗಿ ಸದನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಂವಿಧಾನ ವಿರೋಧ ನಡೆಯನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದೇವು ಎಂದು ಹೇಳಿದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…