Mysore
25
haze

Social Media

ಬುಧವಾರ, 31 ಡಿಸೆಂಬರ್ 2025
Light
Dark

5 ಮಂದಿ ಐಪಿಎಸ್‌ ಅಧಿಕಾರಿಗಳ ಅಮಾನತು ರದ್ದು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

_B Y Vijayendra

ಬೆಂಗಳೂರು: ಕರ್ತವ್ಯ ಲೋಪದ ಆರೋದಡಿ ಅಮಾನತುಗೊಂಡ ಬಳಿಕ ಇದೀಗ 5 ಮಂದಿ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸರ್ಕಾರದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ `ತುಘಲಕ್’ ನಿರ್ಧಾರದಿಂದ ಇಂಥಾ ಘೋರ ದುರಂತ ಸಂಭವಿಸಿತು ಎಂದು ಕಿಡಿಕಾರಿದ್ದಾರೆ.

ವಾಸ್ತವ ಸತ್ಯದ ಹಿನ್ನಲೆಯಲ್ಲಿ ಜನಾಕ್ರೋಶ ಎದುರಿಸಲಾಗದೆ `ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು’ ಭಂಡತನದಿಂದ ಅಧಿಕಾರದಲ್ಲಿ ಉಳಿಯಲು ತಪ್ಪೆಸಗದ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಶಿಕ್ಷೆ ವಿಧಿಸಿ ಹೊಣೆಗೇಡಿತನದಿಂದ ಪಾರಾಗಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಪ್ರಯತ್ನಿಸಿದ್ದರು. ಇದೀಗ ಗತ್ಯಂತರವಿಲ್ಲದೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅಧಿಕಾರಿಗಳ ಅಮಾನತು ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಇತರರು ಅಮಾನತು ರದ್ದುಗೊಂಡ ಅಧಿಕಾರಿಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

Tags:
error: Content is protected !!