Mysore
20
overcast clouds
Light
Dark

ನೂರಾರು ಸಂಸದರ ಅಮಾನತ್ತು ಪ್ರಜಾಪ್ರಭುತ್ವದ ಕಗ್ಗೊಲೆ: ಸಿದ್ದರಾಮಯ್ಯ

ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷ ಹೇಳಿದ್ದನ್ನು ಆಢಳಿತ ಪಕ್ಷ ಕೇಳಬೇಕು ಎಂದು ಹೇಳಿದರು.

ವಿರೋಧ ಪಕ್ಷ ಹೇಳಿದ್ದನ್ನು ನಾವು ಕೇಳಲ್ಲ ಎನ್ನಲು ಸಾಧ್ಯವಿಲ್ಲ. ಜನರು ವಿರೋಧಪಕ್ಷದವರಿಗೂ ಮ್ಯಾನ್‌ಡೇಟ್‌ ಕೊಟ್ಟು ಕಳಿಸಿದ್ದಾರೆ. ಅದನ್ನು ಕಸೆದುಕೊಳ್ಳುವ ಅಧಿಕಾರ ಸ್ಪೀಕರ್‌ಗೂ ಇಲ್ಲ ಯಾರಿಗೂ ಇಲ್ಲ ಎಂದರು.

ನೂರಾರು ಮಂದಿ ಸಂಸದರನ್ನು ಅಮಾನತ್ತುಗೊಳಿಸಿರುವ ಘಟನೆ ಇತಿಹಾಸದಲ್ಲೆ ಇಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಮೇಲೆ ಯಾವುದೇ ರೀತಿಯ ಗೌರವ ಇಲ್ಲ. ಜನರು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದರೆ ಸಹಿಸುವುದಿಲ್ಲ. ಈ ಸರ್ಕಾರ ಸರ್ವಾಧಿಕಾರ ನಡೆಸುತ್ತಿರುವಂತೆ ಕಾಣಿಸುತ್ತಿದೆ ಎಂದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ