ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷ ಹೇಳಿದ್ದನ್ನು ಆಢಳಿತ ಪಕ್ಷ ಕೇಳಬೇಕು ಎಂದು ಹೇಳಿದರು.
ವಿರೋಧ ಪಕ್ಷ ಹೇಳಿದ್ದನ್ನು ನಾವು ಕೇಳಲ್ಲ ಎನ್ನಲು ಸಾಧ್ಯವಿಲ್ಲ. ಜನರು ವಿರೋಧಪಕ್ಷದವರಿಗೂ ಮ್ಯಾನ್‌ಡೇಟ್ ಕೊಟ್ಟು ಕಳಿಸಿದ್ದಾರೆ. ಅದನ್ನು ಕಸೆದುಕೊಳ್ಳುವ ಅಧಿಕಾರ ಸ್ಪೀಕರ್‌ಗೂ ಇಲ್ಲ ಯಾರಿಗೂ ಇಲ್ಲ ಎಂದರು.
ನೂರಾರು ಮಂದಿ ಸಂಸದರನ್ನು ಅಮಾನತ್ತುಗೊಳಿಸಿರುವ ಘಟನೆ ಇತಿಹಾಸದಲ್ಲೆ ಇಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಮೇಲೆ ಯಾವುದೇ ರೀತಿಯ ಗೌರವ ಇಲ್ಲ. ಜನರು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದರೆ ಸಹಿಸುವುದಿಲ್ಲ. ಈ ಸರ್ಕಾರ ಸರ್ವಾಧಿಕಾರ ನಡೆಸುತ್ತಿರುವಂತೆ ಕಾಣಿಸುತ್ತಿದೆ ಎಂದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…