ಬೆಂಗಳೂರು : ಇಲ್ಲಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಘಟನೆಗೆ ಕಾರಣಗಳು ತಿಳಿದುಬಂದಿಲ್ಲ. ಸ್ಫೋಟದ ಪರಿಣಾಮ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, 7 ಮಂದಿಯ ಪೈಕಿ ಮೂವರ ಸ್ಥಿತಿ ಗಂಭೀರವಾಗಿ ಎಂದು ವರದಿಗಳಿಂದ ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.





