ಆಟೋ ಚಾಲಕನ ಬರ್ಬರ ಹತ್ಯೆ

ಕೆ.ಆರ್‌.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಆಟೋ ಚಾಲಕರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ನಾಸಿರ್‌ ಅಹಮದ್‌ (30) ಬರ್ಬರವಾಗಿ ಹತ್ಯೆಗೀಡಾದ ಆಟೋ ಚಾಲಕ.

ಆಲಂಬಾಡಿಕಾವಲು ದರ್ಗಾ ಸಮೀಪದ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ.

ಈ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಹಳೇ ವೈಷಮ್ಯವೇ ಈ ಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಕೆ.ಆರ್‌. ನಿರಂಜನ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿದೆ. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಸೆರೆಗೆ ವ್ಯಾಪಕ ಬಲೆ ಬೀಸಲಾಗಿದೆ.

× Chat with us