ರಾಜ್ಯ

ಔಷಧಿ ಕೇಂದ್ರಗಳಲ್ಲೂ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ ಮಾಹಿತಿ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಸದಾಶಿವನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಔಷಧಿ ಕೇಂದ್ರಗಳಲ್ಲೂ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆಯಾಗುತ್ತಿದೆ ಎಂಬ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ,ಈ ವರ್ಷ ಡ್ರಗ್ಸ್‌ ಮಾರಾಟ ಕಡಿಮೆಯಾಗಿದೆ. ಆದರೂ ಮೆಡಿಕಲ್‌ಗಳಲ್ಲಿಯೂ ಸಹ ಸಿಂಥೇಟಿಕ್‌ ಡ್ರಗ್ಸ್‌ ದೊರೆಯುತ್ತಿದೆ ಎಂಬ ಸುದ್ದಿ ನನಗೆ ಆಶ್ಚರ್ಯವಾಗುವಂತೆ ಮಾಡಿದೆ. ಈಗಾಗಲೇ ಕರ್ನಾಟಕದಲ್ಲಿ ಡ್ರಗ್ಸ್‌ ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಡ್ರಗ್ಸ್‌ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ವಿಚಾರದ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಇತರೆ ಡ್ರಗ್ಸ್‌ ನಿಯಂತ್ರಣ ಹಾಗೂ ಗಾಂಜಾದ ಪ್ರಕರಣಗಳು ಕಡಿಮೆ ಆಗಿವೆ. ಈ ಮಧ್ಯೆ ಮೆಡಿಕಲ್‌ ಸ್ಟೋರ್‌ಗಳಲ್ಲಿ ಡ್ರಗ್ಸ್‌ಗೆ ಔಷಧ ಎಂದು ಹೇಳಿ ಮಾರಾಟ ಮಾಡಲಾಗುತ್ತಿದೆ. ಡ್ರಗ್ಸ್‌ ಮಾರಾಟಕ್ಕೆ ಔಷಧ ಕೇಂದ್ರಗಳಲ್ಲಿ ಕಾನೂನು ಬೇರೆ ರೀತಿ ಆಗುತ್ತದೆ. ಹೀಗಾಗಿ ಮೆಡಿಕಲ್‌ ಸ್ಟೋರ್‌ಗಳಲ್ಲಿ ಡ್ರಗ್ಸ್‌ ಮಾರಾಟದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಡನೆ ಚರ್ಚೆ ಮಾಡುತ್ತೇವೆ ಎಂದೂ ಸಹ ಇದೇ ವೇಳೆ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

7 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

12 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

13 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

13 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

16 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

21 hours ago