ಬೆಂಗಳೂರು: ಕರ್ನಾಟಕ ರಾಜ್ಯವು ಲೂಟಿಕೋರರು, ದರೋಡೆಕೋರರ ಸ್ವರ್ಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಟಿ.ಎ.ಶರವಣ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.21) ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್, ಮಂಗಳೂರು, ಮೈಸೂರಿನಲ್ಲಿ ದರೋಡೆ ಪ್ರಕರಣಗಳು ನಡೆದಿದ್ದು ರಾಜ್ಯದಲ್ಲಿ ಗೃಹ ಇಲಾಖೆ ಇದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆಯನ್ನು ರಾಜ್ಯದ ಜನರು ಮಾತಾಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ನಗರ್ತಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಎಂಟೂವರೆ ಕೆ.ಜಿ.ಚಿನ್ನವನ್ನು ಲೂಟಿ ಮಾಡಲಾಗಿದೆ. ನನ್ನ ಅಂಗಡಿಯ ಒಂದೂಕಾಲು ಕೆ.ಜಿ.ಚಿನ್ನವನ್ನು ಹಾಲ್‍ಮಾರ್ಕ್ ಸೆಂಟರ್‌ಗೆ ಕೊಟ್ಟಾಗ ಕಳ್ಳತನವಾಗಿದೆ ಎಂದು ಅವರು ಆರೋಪಿಸಿದರು. ಹೀಗಾಗಿ ರಾಜ್ಯದಲ್ಲಿ ಜನರು ಸುರಕ್ಷಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಅಲ್ಲದೇ ಭಯದ ವಾತಾವರಣವಿದ್ದು, ಹೂಡಿಕೆದಾರರು ಸುರಕ್ಷತೆಯ ಪ್ರಶ್ನೆ ಮಾಡುವಂತಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಇಂದು ಮಹಾತ್ಮ ಗಾಂಧೀಜಿ ಅವರ ಹೆಸರಲ್ಲಿ ಭಜನೆ ಮಾಡುತ್ತ ಕುರ್ಚಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದ ಜನರಿಗೆ ರಕ್ಷಣೆ ಕೊಡಬೇಕು ಹಾಗೂ ಪೊಲೀಸ್ ಇಲಾಖೆಯನ್ನು ಬಿಗಿಗೊಳಿಸಬೇಕು. ಜೊತೆಗೆ ಅಪರಾಧ ಪ್ರಕರಗಳನ್ನು ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…