ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ದೂರು ನೀಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಆರ್‌ಐಟಿ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು, ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಕೆಲ ಬಹಿರಂಗ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆಗಳಲ್ಲಿ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಹೀಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.