ಬೆಂಗಳೂರು: ರಾಜ್ಯದ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಕ್ಷೇತ್ರಗಳ ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಕೆಲವು ಪ್ರದೇಶಗಳು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸೇರ್ಪಡೆಯಾದ ಕಾರಣ ಕ್ಷೇತ್ರ ಪುನರ್ವಿಂಗಡಣೆ ಅನಿವಾರ್ಯವಾಗಿ, ಚುನಾವಣೆ ವಿಳಂಬವಾಯಿತು ಎಂದು ವಿವರಿಸಿದ್ದಾರೆ.
ರಾಜ್ಯ ಸರ್ಕಾರ ತನ್ನ ಕರ್ತವ್ಯ ಪೂರ್ಣಗೊಳಿಸಿದ್ದು, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಲಿದೆ. ಬಹುತೇಕ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಖಂಡ್ರೆ ಹೇಳಿದ್ದಾರೆ.




