ರಾಜ್ಯ

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು, ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮರಾ ಮೂಲಕ ನಿಗಾ ಇಡಬೇಕು, ಗಸ್ತು ಹೆಚ್ಚಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಕಾಡಿನಲ್ಲಿ ಮೇವು ಮತ್ತು ಕುಡಿಯುವ ನೀರಿನ ಕೊರತೆ ಆಗದಂತೆಯೂ ಎಚ್ಚರ ವಹಿಸಲು, ಜಲಗುಂಡಿಗಳಿಗೆ ಸೌರ ಪಂಪ್ ಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸಲೂ ಸೂಚಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಡ್ರೋನ್ ಕ್ಯಾಮರಾ ನಿಗಾಕ್ಕೆ ಸೂಚನೆ
ಪ್ರತಿ ವರ್ಷ ಶಿವರಾತ್ರಿ, ಯುಗಾದಿ ಮತ್ತು ದೀಪಾವಳಿಯ ಸಂದರ್ಭದಲ್ಲಿ ಮಾದಪ್ಪನ ಭಕ್ತರು ಅರಣ್ಯಮಾರ್ಗವಾಗಿ ಪಾದಯಾತ್ರೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವುದು ಹಿಂದಿನಿಂದ ನಡೆದುಕೊಂಡು ಬಂದಿದೆ, ಭಕ್ತರು ಕಾಲುದಾರಿಯಲ್ಲಿ ಮೆಟ್ಟಿಲೇರಿ ಬರುವ ಮಾರ್ಗದಲ್ಲಿ ಡ್ರೋನ್ ಕ್ಯಾಮರಾ ಅಳವಡಿಸಿ ಸತತ ನಿಗಾ ಇಡುವಂತೆ ಈಶ್ವರ ಖಂಡ್ರೆ ಸೂಚಿಸಿದರು.

ಕಾಲುದಾರಿ, ಮೆಟ್ಟಿಲು ಇರುವ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ, ಹೋಂಗಾರ್ಡ್ಸ್ ಮತ್ತು ಸ್ಥಳೀಯ ಸಿಬ್ಬಂದಿಯ ತಂಡ ರಚಿಸಿ ಭಕ್ತರಿಗೆ ನೆರವಾಗುವ ಅಗತ್ಯವಿದ್ದು, ಇದಕ್ಕೆ ತಗಲುವ ವೆಚ್ಚವನ್ನು ಭರಿಸುವಂತೆ ಮಲೆ ಮಹದೇಶ್ವರಸ್ವಾಮಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಪತ್ರ ಬರೆಯುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಭಕ್ತರು ಕಾವೇರಿ ನದಿ ದಾಟಿ, ಹನೂರು ತಾಲೂಕಿನ ಬಸವನಕಣಕ್ಕೆ ಬಂದು ಅಲ್ಲಿಂದ ಕಾಡಿನಲ್ಲಿಯೇ ನಡೆದುಕೊಂಡು ಶಾಗ್ಯ, ಡಿಎಂ ಸಮುದ್ರ, ಎಲ್ಲೆಮಾಳ, ಮಲ್ಲಯ್ಯನಪುರ, ಕೌದಳ್ಳಿ, ವಡಕೆಹಳ್ಳ, ಕೋಣನಕೆರೆ, ತಾಳುಬೆಟ್ಟ ಮಾರ್ಗವಾಗಿ ಬೆಟ್ಟಕ್ಕೆ ಬರುತ್ತಾರೆ ಎನ್ನಲಾಗಿದೆ. ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಪಾದಯಾತ್ರೆ ಅಪಾಯಕಾರಿಯಾಗಿದೆ. ಹೀಗಾಗಿ ಭಕ್ತರ ಭಾವನೆಗೆ ಧಕ್ಕೆಯಾಗದಂತೆ ಅವರ ಮನವೊಲಿಸಲು ಸಚಿವರು ಸೂಚಿಸಿದರು.

ರಾತ್ರಿಯ ವೇಳೆ ಕಾಡಿನ ಅಂಚಿನಲ್ಲಿ, ಕಾಡಿನೊಳಗಿರುವ ವಸತಿ ಪ್ರದೇಶದಲ್ಲಿ ಮಲಗುವುದೂ ಅಪಾಯಕಾರಿಯಾಗಿದೆ. ಕಳೆದ ಬುಧವಾರ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬ ಯುವಕ ಚಿರತೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಹೀಗಾಗಿ ಬಸ್, ಕಾರುಗಳಲ್ಲಿ ತೆರಳಿ ಮಾದಪ್ಪನ ದರ್ಶನ ಪಡೆಯುವಂತೆ ಭಕ್ತರ ಮನವೊಲಿಸಲು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಒಳಗೊಂಡ ತಂಡ ರಚಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳಿಸಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ ಸಿ ರೇ ಮತ್ತಿತರರು ಭಾಗಿಯಾಗಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

5 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

6 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

6 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

7 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

8 hours ago