ramalinga reddy
ರಾಮನಗರ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಿದರೆ ಪಕ್ಷದಕ್ಕೆ ದೊಡ್ಡ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದ್ದಾರೆ.
ಈ ಕುರಿತು ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತುಕತೆ ಬಗ್ಗೆ ನನಗೆ ಮಾಹಿತಿ ಇಲ್ಲ. ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ. ಬಹಿರಂಗವಾಗಿ ಮಾತನಾಡದೇ ನಾಲ್ಕು ಗೋಡೆ ಮಧ್ಯೆ ಮಾತನಾಡಲಿ. ಪಕ್ಷದ ಹಿತದೃಷ್ಟಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ
ಇನ್ನು ಆರ್‌ಎಸ್‌ಎಸ್ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ತಡೆ ಕುರಿತು ಮಾತನಾಡಿದ ಅವರು, ಸರ್ಕಾರದ ಆದೇಶಕ್ಕೆ ಸರ್ಕ್ಯೂಲರ್ ಮೇಲೆ ಹೈಕೋರ್ಟ್ ಆದೇಶ ಮಾಡಿದೆ. ಸಿಎಂ ಕೂಡ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದಿದ್ದಾರೆ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಮಾಡಿದ್ದರು. ಇದು ಎಲ್ಲಾ ಪಕ್ಷಗಳು ಸಂಘ ಸಂಸ್ಥೆಗಳಿಗೆ ಅನ್ವಯ ಆಗುತ್ತದೆ ಎಂದು ಹೇಳಿದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…