Mysore
23
broken clouds

Social Media

ಭಾನುವಾರ, 23 ಮಾರ್ಚ್ 2025
Light
Dark

ಮೇ ತಿಂಗಳ ಬಳಿಕ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ 

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಯಿದೆ.

ಮೂರು ವರ್ಷಗಳಾದರೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ಹೈಕೋರ್ಟ್‌ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರವಾಗಿ ಮಾತನಾಡಿದ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್‌, ತಾಲ್ಲೂಕು ಪಂಚಾಯತ್‌ ಚುನಾವಣೆಯನ್ನು ಸರ್ಕಾರ ನಡೆಸಲಿದೆ ಎಂದು ತಿಳಿಸಿದರು.

ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಫಣೀಂದ್ರ ಹೇಳಿದರು. ಈ ವೇಳೆ ಕೋರ್ಟ್‌ ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಹೇಳಿದ್ದ ಸರ್ಕಾರದ ಹೇಳಿಕೆ ದಾಖಲಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಈ ವರ್ಷದ ಮೇ ತಿಂಗಳಿನಲ್ಲಿ ನಡೆಸುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ.

Tags: