ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಯಿದೆ.
ಮೂರು ವರ್ಷಗಳಾದರೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರವಾಗಿ ಮಾತನಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಸರ್ಕಾರ ನಡೆಸಲಿದೆ ಎಂದು ತಿಳಿಸಿದರು.
ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಫಣೀಂದ್ರ ಹೇಳಿದರು. ಈ ವೇಳೆ ಕೋರ್ಟ್ ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಹೇಳಿದ್ದ ಸರ್ಕಾರದ ಹೇಳಿಕೆ ದಾಖಲಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಈ ವರ್ಷದ ಮೇ ತಿಂಗಳಿನಲ್ಲಿ ನಡೆಸುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…